ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಪರಿಸ್ಥಿತಿ ಹತೋಟಿಯಲ್ಲಿಡಲು ಶಿವಮೊಗ್ಗ ನಗರದಲ್ಲಿ ಜಾರಿಗೆ ತರಲಾದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ಮಾ.4ರವರೆಗೆ ವಿಸ್ತರಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಂಬಂಧ 144 ಸೆಕ್ಷನ್ ಅಡಿಯಲ್ಲಿ ಜಾರಿಗೊಳಿಸಿರುವಂತ ನಿಷೇಧಾಜ್ಞೆಯನ್ನು ಮಾರ್ಚ್ 4 ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಸೆಲ್ವ ಮಣಿ ಆದೇಶಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಈ ಸಮಯದಲ್ಲಿ ವ್ಯಾಪಾರ, ವಹಿವಾಟು ಮಾಡಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement. Scroll to continue reading.

ರಾತ್ರಿ 7 ಗಂಟೆ ಬಳಿಕ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ನಾಳೆಯಿಂದ ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳು ಪುನಾರಂಭವಾಗಲಿದೆ.
In this article:Diksoochi news, diksoochi Tv, diksoochi udupi, Selva Mani, Shivamogga

Click to comment