ಬೆಂಗಳೂರು: ಕ್ರೇಜಿಸ್ಟಾರ್ ವಿ.ರವಿಚಂದ್ರನ್ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (83) ಇಂದು ವಿಧಿವಶರಾಗಿದ್ದಾರೆ.
ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ವಿ.ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿಯವರು, ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು.
Advertisement. Scroll to continue reading.

ಅವರನ್ನು ರಾಜಾಜಿನಗರದ ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪಟ್ಟಮ್ಮಾಳ್ ವೀರಸ್ವಾಮಿಯವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಂತ್ಯಕ್ರಿಯೆಯನ್ನು ಇಂದು ಸಂಜೆ ನೆರವೇರಿಸಲಾಗುತ್ತದೆ ಎನ್ನಲಾಗಿದೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, Pattamal Veeraswami, V.Ravichandran
Click to comment

































