ಉಡುಪಿ: ನೇಣು ಬಿಗಿದು ರಿಕ್ಷಾ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಳ್ಳಿ ಗ್ರಾಮದ ಕುಂಜಿಬೆಟ್ಟುವಿನಲ್ಲಿ ನಡೆದಿದೆ.
ದಯಾನಂದ (45) ಆತ್ಮಹತ್ಯೆ ಮಾಡಿಕೊಂಡವರು. ಕುಂಜಿಬೆಟ್ಟು ಡಿಸಿಎಂ ಕಾಲೋನಿಯಲ್ಲಿರುವ ಆತನ ಹೆಂಡತಿ ಮನೆಯ ಹಾಲ್ನಲ್ಲಿ ಚೂಡಿದಾರದ ಶಾಲ್ ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಚಿಕಿತ್ಸೆಯ ಬಗ್ಗೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪರೀಕ್ಷಿಸಿದ ವೈದ್ಯರು ದಯಾನಂದ ರವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದರು ಎನ್ನಲಾಗಿದೆ.
ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Advertisement. Scroll to continue reading.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.