Connect with us

Hi, what are you looking for?

Diksoochi News

Uncategorized

ಆರ್ ಸಿ ಬಿ ತಂಡದ ನೂತನ ನಾಯಕನಾಗಿ ಫಾಫ್ ಡು ಪ್ಲೆಸಿಸ್‌ ನೇಮಕ

2

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಯಾರಾಗಬಹುದು ಎಂಬ ಕಾತುರಕ್ಕೆ ತೆರಡ ಬಿದ್ದಿದೆ. 15ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಫಾಫ್ ಡು ಪ್ಲೆಸಿಸ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಆಯ್ಕೆ ಆಗಿದ್ದಾರೆ.

ಫಾಫ್ ಡು ಪ್ಲೆಸಿಸ್‌ ಈ ಹಿಂದೆ ದಕ್ಷಿಣ ಆಫ್ರಿಕಾ ತಂಡದ ನಾಯಕರಾಗಿ ಯಶಸ್ವಿಯಾಗಿ ತಂಡವನ್ನು ಮುನ್ನಡೆಸಿದ್ದರು.

ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯು ಇಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 8 ಗಂಟೆಯ ವರೆಗೆ ಉದ್ಯಾನನಗರಿ ಬೆಂಗಳೂರಿನ ಮ್ಯೂಸಿಯಂ ಕ್ರಾಸ್‌ ರೋಡ್‌ನಲ್ಲಿ RCB unbox ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಅಭಿಮಾನಿಗಳಿಗೆ ಭರಪೂರ ಮನರಂಜನೆಯನ್ನು ನೀಡುತ್ತಿದೆ. ಇದೇ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ತನ್ನ ನೂತನ ಜೆರ್ಸಿಯನ್ನು ಇಂದು ಸಂಜೆ 7 ಗಂಟೆಗೆ ಅನಾವರಣ ಮಾಡಲಿದೆ.

Advertisement. Scroll to continue reading.

2013ರಿಂದ 2021ರವರೆಗೆ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. 2021ನೇ ಸಾಲಿನ ಐಪಿಎಲ್ ಟೂರ್ನಿಯ ಆರಂಭಕ್ಕೂ ಮುನ್ನವೇ ಕೊಹ್ಲಿ, ಈ ಐಪಿಎಲ್ ಟೂರ್ನಿಯ ಬಳಿಕ ಆರ್‌ಸಿಬಿ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದರು. 

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!