ಮೈಸೂರು: ಮೈಸೂರು ವಿವಿಯಿಂದ ದಿವಂಗಂತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ವಿವಿ ಘೋಷಿಸಿದೆ.
ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ. ಮಾರ್ಚ್ 22 ರಂದು ನಡೆಯುವ ಘಟಿಕೋತ್ಸವದಲ್ಲಿ ಮರಣೋತ್ತರ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತದೆ ಎಂಬುದಾಗಿ ಮೈಸೂರು ವಿವಿ ಕುಲಪತಿ ತಿಳಿಸಿದ್ದಾರೆ.
46 ವರ್ಷದ ಹಿಂದೆ ಪದ್ಮಭೂಷಣ ಡಾ.ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿದ್ದಂತ ಮೈಸೂರು ವಿವಿ ಇದೀಗ ಅವರ ಪುತ್ರ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ.
Advertisement. Scroll to continue reading.