ವರದಿ : ಬಿ.ಎಸ್.ಆಚಾರ್ಯ
ಆಲಡ್ಕ : ಹಲುವಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಲಡ್ಕ ಶಾಲೆಯ ಹಳೆವಿದ್ಯಾರ್ಥಿಗಳು ಮತ್ತು ದಾನಿಗಳ ಸಹಕಾರದಿಂದ ಶಾಲೆಯ ವಜ್ರ ಮಹೋತ್ಸವದ ಸುಸಂದರ್ಭದಲ್ಲಿ ಶಾಲಾ ವಾಹನ ‘ವಜ್ರರಥ’ ವನ್ನು ಕೊಡುಗೆಯಾಗಿ ನೀಡಲಾಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಮೇಶ್ ಭಟ್ ನೂಜಿ ಇವರು ಬ್ರಹ್ಮಾವರ ವಲಯದ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಟಿ ನಾಯ್ಕ್ ಇವರ ಮುಖಾಂತರ ಶಾಲೆಗೆ ಹಸ್ತಾಂತರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನುಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀ ಸುರೇಂದ್ರ ನಾಯ್ಕ್ ನೂಜಿ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ಕಿನ್ಮಾನ್ ಬೆಟ್ಟು, ಕಾರ್ಯದರ್ಶಿ ರಾಧಾಕೃಷ್ಣ ಪ್ರಭು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬ್ರಹ್ಮಾವರ ವಲಯ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾವಂಜೆ, ಉಪಾಧ್ಯಕ್ಷ ವನಿತಾ ಶೆಟ್ಟಿ, ಕೋಶಾಧಿಕಾರಿ ಗೋಪಾಲ್ ನಾಯ್ಕ್, ಮಂದಾರ್ತಿ ಹೋಬಳಿ ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ, ಸಮೂಹ ಸಂಪನ್ಮೂಲ ವ್ಯಕ್ತಿ ದಿನೇಶ್ ನಮ್ಮ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿಗಳು, ದಾನಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು, ಶಾಲಾ ಶಿಕ್ಷಕರು, ಅಡುಗೆ ಸಿಬ್ಬಂದಿಯವರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಶಾಲಾ ವಾಹನಕ್ಕೆ ಧನ ಸಹಾಯ ನೀಡಿದ ಹಳೆವಿದ್ಯಾರ್ಥಿಗಳು ಮತ್ತು ದಾನಿಗಳಿಗೆ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಯವರು ಕೃತಜ್ಞತಾ ಪತ್ರವನ್ನು ನೀಡಿದರು.
ಪ್ರಭಾರ ಮುಖ್ಯ ಶಿಕ್ಷಕ ರವಿ.ಎಸ್ ಪೂಜಾರಿಯವರು ಸ್ವಾಗತಿಸಿ, ಶಿಕ್ಷಕಿ ಶಾಲಿನಿ ರಾಜೇಶ್ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ಶಕುಂತಲಾ ಕಾರ್ಯಕ್ರಮ ನಿರೂಪಿಸಿದರು



































