ನವದೆಹಲಿ: ಕರ್ನಾಟಕ ಹೈಕೋರ್ಟ್ ಇಂದು ಹಿಜಾಬ್ ವಿವಾದದ ಕುರಿತಂತೆ ನೀಡಿದ ತೀರ್ಪನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.
ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಶಾಲಾ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಎಂದು ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸ್ಲಲಿಸಲಾಗಿದೆ.
ವಿದ್ಯಾರ್ಥಿನಿ ನಿಭಾ ನಜಾರಿಂದ ಹೈಕೋರ್ಟ್ ತೀರ್ಪು ಪ್ರಶ್ನಿಸಿ, ವಿದ್ಯಾರ್ಥಿಯ ಪರವಾಗಿ ವಕೀಲರಾದಂತ ಆನಾಸ್ ತನ್ವೀರ್ ಎಂಬುವರು ಮೇಲ್ಮನವಿಯನ್ನು ಸಲ್ಲಿಸಿದ್ದಾರೆ.
Advertisement. Scroll to continue reading.

ಮತ್ತೊಂದೆಡೆ ಹಿಂದೂ ಸೇನಾದಿಂದ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪಿನ ಕುರಿತಂತೆ ಕೇವಿಯಟ್ ಸಲ್ಲಿಸಲಾಗಿದೆ. ಹಿಜಾಬ್ ಪ್ರಕರಣದಲ್ಲಿ ನಮ್ಮ ಮನವಿಯನ್ನು ಆಲಿಸಬೇಕು ಎಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವಂತಹ ಕೇವಿಯಟ್ ನಲ್ಲಿ ಕೋರಲಾಗಿದೆ.
In this article:Diksoochi news, Diksoochi t v, diksoochi udupi, Hijab Row, supreme Court

Click to comment