ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಹಿಜಾಬ್ ಕುರಿತು ನ್ಯಾಯಾಲಯದ ತೀರ್ಪು ಸಮಂಜಸವಾಗಿಲ್ಲ ಎಂದು ಮುಸ್ಲಿಂ ಸಂಘಟನೆಗಳು ರಾಜ್ಯದಾದ್ಯಂತ ನೀಡುದ ಬಂದ್ ಕರೆಗೆ ಬ್ರಹ್ಮಾವರ ಭಾಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ವ್ಯಾಪಾರ ವ್ಯವಹಾರ ಸ್ಥಗಿತಗೊಳಿಸಿದ್ದಾರೆ.

ಮುಸ್ಲಿಂ ಸೆಂಟ್ರಲ್ ಕಮಿಟಿ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಮತ್ತು ಎಸ್.ಡಿ.ಪಿ.ಐ ಸಂಘಟನೆಗಳ ಬೆಂಬಲದೊಂದಿಗೆ ನಡೆಯುತ್ತಿರುವ ಬಂದ್ ಗೆ ಬೆಂಬಲ ಸೂಚಿಸಿ ಮುಸ್ಲಿಂ ಸಮುಯದಾಯದವರು ಬೆಳಗ್ಗಿನಿಂದಲೇ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದಾರೆ.

ಮುಸ್ಲಿಂ ಒಡೆತನದ ಚಪ್ಪಲಿ ಅಂಗಡಿ, ಬಟ್ಟೆ ಅಂಗಡಿ, ಹೋಟೆಲ್, ಹೂವಿನ ಅಂಗಡಿಗಳು ಮುಚ್ಚಿವೆ. ಆದರೆ, ಹಿಂದೂ ದೇವರ ಹೆಸರಿರುವ ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ಅಂಗಡಿಗಳು ತೆರೆದಿವೆ.


ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Advertisement. Scroll to continue reading.

In this article:brahmavara, Diksoochi news, Diksoochi t v, diksoochi udupi, state band
Click to comment

































