Connect with us

Hi, what are you looking for?

Diksoochi News

ರಾಜ್ಯ

ಭೀಕರ ಅಪಘಾತ: ಖಾಸಗಿ ಬಸ್ ಪಲ್ಟಿ; 8 ಮಂದಿ ಸಾವು, ಹಲವರಿಗೆ ಗಂಭೀರ ಗಾಯ

3

ತುಮಕೂರು : ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 8 ಜನರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಗ್ರಾಮದ ಬಳಿ ನಡೆದಿದೆ.

ಪಾವಗಡದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement. Scroll to continue reading.

ಬಸ್ ನಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಮಹಿಳೆಯರು, ವೃದ್ಧರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮೃತಪಟ್ಟವರಲ್ಲಿ ಹೆಚ್ಚು ವಿದ್ಯಾರ್ಥಿಗಳೇ ಇದ್ದಾರೆ ಎನ್ನಲಾಗಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!