ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರಕೂರು ಇಲ್ಲಿ ರೆಡ್‌ಕ್ರಾಸ್ ಘಟಕದ ವತಿಯಿಂದ ರೆಡ್‌ಕ್ರಾಸ್ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಶನ್ ಹಾಗೂ ಪ್ರಥಮ ಚಿಕಿತ್ಸಾ ತರಬೇತಿ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ಉಡುಪಿ ಇದರ ಅಧ್ಯಕ್ಷ ಬಸ್ರೂರು ರಾಜೀವ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
Advertisement. Scroll to continue reading.

ಡಾ. ಕೀರ್ತಿ ಪಾಲನ್ ಪ್ರಥಮ ಚಿಕಿತ್ಸಾ ತರಬೇತಿ ನೀಡಿದರು.ಕಾಲೇಜಿನ ಪ್ರಾಂಶುಪಾಲ ಡಾ.ರಮೇಶ್ ಆಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೆಡ್‌ಕ್ರಾಸ್ ಸಂಯೋಜಕ ವೀರಣ್ಣ ಎಸ್.ಸಿ ಉಪಸ್ಥಿತರಿದ್ದರು.
ಕುಮಾರಿ ಸಿಂಚನ ಸ್ವಾಗತಿಸಿ, ಕುಮಾರಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿ, ಪ್ರಕಾಶ್ ವಂದಿಸಿದರು.


































