ಮಂಡ್ಯ: ಕಾರು ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಮನ್ ಮುಲ್ ನಿರ್ದೇಶಕ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಾಂಡವಪುರದಲ್ಲಿ ನಡೆದಿದೆ.
ಪಾಂಡವಪುರ ತಾಲೂಕಿನ ಮೇಲುಕೋಟೆಯ ಕಣಿವೆ ಬಳಿಯಲ್ಲಿ ಕೆ ಎಸ್ ಆರ್ ಟಿ ಸಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಪರಿಣಾಮ ಮನ್ ಮುಲ್ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
Advertisement. Scroll to continue reading.

ಮನ್ ಮುಲ್ ನಿರ್ದೇಶಕ ರಾಮಚಂದ್ರ ಹಾಗೂ ಅವರ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದಯ ತಿಳಿದು ಬಂದಿದೆ.
ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಈ ಬಗ್ಗೆ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.



































