ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗಲಿದೆ. ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಾಗಿದೆ. ಹಿಜಾಬ್ ಧರಿಸಿ ಪರೀಕ್ಷೆಗೆ ಬಂದರೆ ಅವಕಾಶ ಇರುವುದಿಲ್ಲ.
ಬಾರಿ ರಾಜ್ಯದ 15,387 ಶಾಲೆಗಳ 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಯಲಿದೆ. 49,817 ಕೊಠಡಿ ಮೇಲ್ವಿಚಾರಕರು ಭಾಗಿಯಾಗಲಿದ್ದಾರೆ. ಪರೀಕ್ಷೆ ಬರೆಯಲು 45,289 ಪರೀಕ್ಷಾ ಕೊಠಡಿಗಳ ಸಿದ್ಧತೆ ಮಾಡಲಾಗಿದೆ.
ರಾಜ್ಯದಲ್ಲಿ ಒಟ್ಟು 8,73,846 ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 4,52,732 ಗಂಡು ಮಕ್ಕಳು ಹಾಗೂ 4,21,110 ಹೆಣ್ಣು ಮಕ್ಕಳಿದ್ದಾರೆ. 04 ಜನ ತೃತಿಯ ಲಿಂಗಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ.
Advertisement. Scroll to continue reading.



































