ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆಯನ್ನು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 8 ಮಂದಿಯನ್ನು ಇಂದು ಬಂಧಿಸಿದ್ದಾರೆ.
ಕೆಲ ದುಷ್ಕರ್ಮಿಗಳು ನಿನ್ನೆ ಸಿಎಂ ಕೇಜ್ರಿವಾಲ್ ಮನೆ ಸುತ್ತ ಮುತ್ತಲಿನ ಸಿಸಿಟಿವಿ ಕ್ಯಾಮೆರಾ ಒಡೆದಿದ್ದಾರೆ. ಸಿಎಂ ಮನೆ ಸುತ್ತಲಿನ ಭದ್ರತಾ ತಡೆಗೋಡೆ ಮುರಿದಿರುವ ಬಗ್ಗೆ
ದೆಹಲಿ ವಿಧಾನಸಭೆಯಲ್ಲಿ ಮಾತನಾಡುವಾಗ ಕೇಜ್ರಿವಾಲ್ ಅವರು ಬಿಜೆಪಿ ಪ್ರಚಾರ ಮಾಡುತ್ತಿರುವ ದಿ ಕಾಶ್ಮೀರ್ ಫೈಲ್ಸ್ ಚಿತ್ರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಕೇಜ್ರಿವಾಲ್ ಮನೆಯ ಮೇಲೆ ಬಿಜೆಪಿ ಬೆಂಬಲಿಗರು ದಾಳಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
Advertisement. Scroll to continue reading.