ಬೆಂಗಳೂರು: ಈಗಾಗಲೇ ಹಲವರು ಜೆಡಿಎಸ್ ಗೆ ತೊರೆದು ವಿವಿಧ ರಾಷ್ಟ್ರೀಯ ಪಕ್ಷಗಳನ್ನು ಸೇರಿದ್ದಾರೆ. ಇದೀಗ ಬಸವರಾಜ ಹೊರಟ್ಟಿ ಸರದಿ. ಅವರು ಜೆಡಿಎಸ್ ತೊರೆದು, ಶೀಘ್ರವೇ ಬಿಜೆಪಿ ಸೇರ್ಪಡೆಯಾಗೋದಾಗಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘೋಷಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಸೇರ್ಪಡೆಯಾಗುವುದಯ ಖಚಿತವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಎಲ್ಲರೂ ಬಿಜೆಪಿ ಸೇರ್ಪಡೆಗೆ ಸಹಮತ ವ್ಯಕ್ತ ಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಈಗಾಗಲೇ ಈ ವಿಷಯವನ್ನು ಜೆಡಿಎಸ್ ವರಿಷ್ಠ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದು, ಅವರು ಕೂಡ ಜೆಡಿಎಸ್ ಪಕ್ಷ ಬಿಡುವ ಬಗ್ಗೆ ಒಪ್ಪಿಗೆ ಸೂಚಿಸಿದ್ದಾರೆ. ಶೀಘ್ರವೇ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ.
Advertisement. Scroll to continue reading.

In this article:Basavaraj Horatti, bjp, Diksoochi news, diksoochi Tv, diksoochi udupi, JDS

Click to comment