ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಮಲೆನಾಡು, ಬೆಂಗಳೂರು, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement. Scroll to continue reading.

ಇಂದು ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಇಂದಿನಿಂದ 4 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.


































