ಬೆಂಗಳೂರು : ಕಾಲೇಜು ಹಂತದಲ್ಲಿಯೂ ಕನ್ನಡ ಕಲಿಕೆ ಕಡ್ಡಾಯಗೊಳಿಸಿ, ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ರಾಜ್ಯ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿಯಡಿ ಎಲ್ಲಾ ವಿದ್ಯಾರ್ಥಿಗಳಿಗೂ ಕನ್ನಡ ಕಲಿಕೆ ಕಡ್ಡಾಯಗೊಳಿಸಿತ್ತು.
ಕಾಲೇಜು ಹಂತದಲ್ಲಿಯೂ ಕನ್ನಡ ಕಲಿಕೆ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶಿಸಿತ್ತು. ಆದರೆ ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆ ಕಡ್ಡಾಯವಲ್ಲ ಎಂದು ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿತ್ತು. ಹೀಗಾಗಿ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.
Advertisement. Scroll to continue reading.