ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಪುರದಲ್ಲಿ ನಡೆದಿದೆ.
ಶಿವಪುರದ ಐತು ಪೂಜಾರಿಯವರ ಪುತ್ರ ದೀಕ್ಷಿತ್ (23) ಇಂದು ತನ್ನ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Advertisement. Scroll to continue reading.
ಮೃತ ಯುವಕ ದೀಕ್ಷಿತ್ ಈ ಹಿಂದೆ ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡಿಕೊಂಡಿದ್ದು 1 ತಿಂಗಳಿಂದ ಮಣಿಪಾಲದ ಖಾಸಗಿ ಸಂಸ್ಥೆಯಲ್ಲಿ ದುಡಿಯುತ್ತಿದ್ದ ಎನ್ನಲಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
Advertisement. Scroll to continue reading.