Connect with us

Hi, what are you looking for?

Diksoochi News

ಕರಾವಳಿ

ಬನ್ನಂಜೆ ಡಾ.ವಿ.ಎಸ್. ಆಚಾರ್ಯ ಕ.ರಾ.ರ.ಸಾ ನಿಗಮ ಬಸ್ಸು ನಿಲ್ದಾಣ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

1

ವರದಿ : ಬಿ.ಎಸ್.ಆಚಾರ್ಯ

ಉಡುಪಿ : ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಿರುವ ಡಾ. ವಿ.ಎಸ್. ಆಚಾರ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಗ್ರಾಮಾಂತರ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ. ರಘುಪತಿ ಭಟ್, ಉಡುಪಿಗೆ ಅವಶ್ಯಕತೆ ಇದ್ದ ಈ ಬಸ್ ನಿಲ್ದಾಣಕ್ಕೆ ಅಜಾತಶತ್ರು, ಧೀಮಂತ ನಾಯಕ, ರಾಜಕೀಯ ಮುತ್ಸದ್ದಿ ಡಾ.ವಿ.ಎಸ್. ಆಚಾರ್ಯ ಅವರ ಹೆಸರನ್ನು ನಾಮಕರಣ ಮಾಡಿರುವುದು ಅರ್ಥಪೂರ್ಣವಾಗಿದೆ ಎಂದರು.

Advertisement. Scroll to continue reading.

ಈ ಸಂದರ್ಭದಲ್ಲಿ ಉಡುಪಿ ನಗರಕ್ಕೆ ಅವಶ್ಯಕವಾಗಿರುವ ಒಳಚರಂಡಿ ಅವ್ಯವಸ್ಥೆಯ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತಂದು ಒಳಚರಂಡಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.

ಉಡುಪಿಯಲ್ಲಿ 250 ಬೆಡ್ ಸಾಮರ್ಥ್ಯದ ಎರಡು ಸರಕಾರಿ ಆಸ್ಪತ್ರೆಗಳಿದ್ದು, ಇಲ್ಲಿನ ಜನತೆಯ ಬೇಡಿಕೆಯಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಬಗ್ಗೆ ಮನವಿ ಮಾಡಿದರು.

ಅಲ್ಲದೆ ಕೂಸಮ್ಮ ಶಂಭು ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಯ ಮತ್ತು ಸಿಬ್ಬಂದಿಗಳ ವೇತನ ಸೇರಿದಂತೆ ಬಾಕಿ ಇರುವ ಮೊತ್ತವನ್ನು ಸರ್ಕಾರದಿಂದ ಪಾವತಿಸುವಂತೆ ಮನವಿ ಮಾಡಿದರು.

ಬಸ್ಸು ನಿಲ್ದಾಣವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಡುಪಿಯ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಶಾಸಕ ಕೆ. ರಘುಪತಿ ಭಟ್ ಅವರು ಇಟ್ಟ ಬೇಡಿಕೆಗಳಾದ ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಪಡಿಸುವುದು, ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವುದು ಸೇರಿದಂತೆ ಕೂಸಮ್ಮ ಶಂಭು ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಬಾಕಿ ಇರುವ ಮೊತ್ತವನ್ನು ಪಾವತಿಸುವ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್, ಶಾಸಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ. ಚಂದ್ರಪ್ಪ, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ‌ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಕಲ್ಮಾಡಿ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಳೀಯ ನಗರಸಭಾ ಸದಸ್ಯ ಸವಿತಾ ಹರೀಶ್ ರಾಮ್ ಮತ್ತು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ ಹಾಗೂ ಕೆ.ಎಸ್.ಆರ್.ಟಿ.ಸಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!