Connect with us

Hi, what are you looking for?

Diksoochi News

ಕರಾವಳಿ

ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಕೋಟೇಶ್ವರ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆ

2

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಕೋಟೇಶ್ವರ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆಯು ಕೋಡಿ ಕಿನಾರ ಶೆಣೈ ರೆಸಾರ್ಟ್ ನಲ್ಲಿ ನಡೆಯಿತು.

ಈ ಸಂದರ್ಭ ಕುಂದಾಪುರ ಮಂಡಲದ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ, ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆ ಬೂತ್ ಮಟ್ಟದಲ್ಲಿ ಬಲಪಡಿಸಿ ಸಶಕ್ತ ಬೂತ್ ಸಧೃಡ ಭಾರತ ಎಂಬ ಪಕ್ಷದ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪದಾಧಿಕಾರಿಗಳು, ಕಾರ್ಯಕರ್ತರು ಕಾರ್ಯಪ್ರವೃತ್ತರಾಗುವ ಬಗ್ಗೆ, ಬೂತ್ ಮಟ್ಟದಲ್ಲಿ ಸರ್ಕಾರದ ವಿವಿಧ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು, ಸ್ಥಳೀಯ ಜನಪ್ರತಿನಿಧಿಗಳು ನಿರಂತರವಾಗಿ ಸಾರ್ವಜನಿಕರ ಸಂಪರ್ಕದಲ್ಲಿದ್ದು ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದರು.

Advertisement. Scroll to continue reading.

ಕೋಟೇಶ್ವರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣ ಗೊಲ್ಲ ಸಭೆಯ ಅಧ್ಯಕ್ಷತೆ ವಹಿಸಿದ್ದರು..

ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಕೋಟೇಶ್ವರ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನಾಗರಾಜ್ ಆಚಾರ್ಯ, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಬಾಣ, ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಗೋಪಾಲ ಕಲಂಜಿ,, ಕೋಟೇಶ್ವರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಾಗಿಣಿ ದೇವಾಡಿಗ, ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಒಂದೇ ಮಾತರಂ ಗೀತೆಯನ್ನು ಮಂಡಲದ ಕಾರ್ಯದರ್ಶಿ ಸುರೇಂದ್ರ ಕಾಂಚನ್ ಸಂಗಮ್ ಹಾಡಿದರು.
ಕಾರ್ಯಕ್ರಮದ ನಿರೂಪಣೆಯನ್ನು, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಾಗರಾಜ್ ಆಚಾರ್ಯ ನಿರ್ವಹಿಸಿದರು. ಕಾರ್ಯದರ್ಶಿ ರಮೇಶ್ ಪೈ ವಂದಿಸಿದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!