Connect with us

Hi, what are you looking for?

Diksoochi News

ರಾಜ್ಯ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

1

ಬೆಂಗಳೂರು : ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಮೇ.18ರವರೆಗೆ ಪರೀಕ್ಷೆ ನಡೆಯಲಿದ್ದು, ಈ ಬಾರಿ ಒಟ್ಟು 6.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

6,84,255 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಈ ಪೈಕಿ 3,46,936 ಬಾಲಕರು, 3,37,319 ಬಾಲಕಿಯರಿದ್ದಾರೆ. ಒಟ್ಟು 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಹಿಜಾಬ್ ಗೆ ಅವಕಾಶ ಇಲ್ಲ:

Advertisement. Scroll to continue reading.

ದ್ವಿತೀಯ ಪಿಯುಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಹಿಜಾಬ್ ಧರಿಸಿ ಬಂದ್ರೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಇಲ್ಲ. ಎಸ್ ಎಸ್‌ಎಲ್ ಸಿ ಪರೀಕ್ಷೆಯಂತೆ ದ್ವಿತೀಯ ಪಿಯುಸಿ ಪರೀಕ್ಷೆಗೂ ಹಿಜಾಬ್ ನಿಷೇಧ ಮಾಡಲಾಗಿದೆ.

ಏಪ್ರಿಲ್ 22 ರಿಂದ ಮೇ. 18 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಎಸ್‌ಎಸ್ ಎಲ್ ಸಿ ಮಾದರಿಯಲ್ಲೇ ನಡೆಸಲಾಗುವುದು. ರಾಜ್ಯದ ಶೇ. 90 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇದೆ. ಶೇ. 10 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇಲ್ಲ. ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮ ಸೂಚನೆಯ ವಸ್ತ್ರ ಧರಿಸಿ ಬರುವಂತಿಲ್ಲ ಎಂದು ಶಿಕ್ಷಣ ಇಲಾಖೆ ಈಗಾಗಲೇ ಹೇಳಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!