Connect with us

Hi, what are you looking for?

Diksoochi News

ರಾಷ್ಟ್ರೀಯ

ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ; ಉಲ್ಲಂಘಿಸುವವರಿಗೆ 500 ರೂ. ದಂಡ

1

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ದೆಹಲಿ ಸರ್ಕಾರ ಶುಕ್ರವಾರ ಆದೇಶಿಸಿದೆ. ಖಾಸಗಿ ವಾಹನಗಳಲ್ಲಿ ಒಟ್ಟಿಗೆ ಪ್ರಯಾಣಿಸುವವರಿಗೆ ಈ ಆದೇಶ ಅನ್ವಯವಾಗುವುದಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘಿಸುವವರಿಗೆ 500 ರೂ. ದಂಡ ವಿಧಿಸಲಾಗುವುದು ಎಂದು ಆದೇಶಿಸಲಾಗಿದೆ.

ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಆದೇಶ ಹೊರಡಿಸಿದ್ದು, ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಕಳೆದ ಬುಧವಾರ ತನ್ನ ಸಭೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯಗೊಳಿಸಲು ನಿರ್ಧರಿಸಿದೆ.

ಇಂದು ಸರ್ಕಾರ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ದೆಹಲಿ ಸರ್ಕಾರ ಶಾಲೆಗಳಲ್ಲಿ ಕೋವಿಡ್ ಹರಡುವಿಕೆ ತಡೆ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದು, ಶಾಲೆಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!