ನವದೆಹಲಿ : ಭಾರತದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ಪರಿಸ್ಥಿತಿಯನ್ನು ಅವಲೋಕಿಸಲು ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.
ಏಪ್ರಿಲ್ 27 ರ ಬುಧವಾರ ಮಧ್ಯಾಹ್ನ 12 ಗಂಟೆಗೆ ಸಭೆಯನ್ನು ಕರೆಯಲಾಗಿದೆ ಮತ್ತು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಆಯಾ ಸಚಿವಾಲಯಗಳ ಅಧಿಕಾರಿಗಳು ಮತ್ತು ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
Advertisement. Scroll to continue reading.

ಕಳೆದ ಕೆಲವು ದಿನಗಳಲ್ಲಿ, ಭಾರತದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,593 ಹೊಸ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ, ಸಕ್ರಿಯ ಸಂಖ್ಯೆ ಈಗ 15,873 ಆಗಿದೆ.