ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಗುರುವಾರ ಅಸ್ಸಾಂನ ದಿಬ್ರುಗಢದ ಖನಿಕೂರ್ನಲ್ಲಿ ಆರು ಕ್ಯಾನ್ಸರ್ ಆಸ್ಪತ್ರೆಗಳನ್ನ ದೇಶಕ್ಕೆ ಸಮರ್ಪಿಸಿದ್ದು, ಏಳು ಕ್ಯಾನ್ಸರ್ ಆಸ್ಪತ್ರೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಪ್ರಧಾನಿ ಮೋದಿ ಅಸ್ಸಾಂಗೆ ಭೇಟಿ ನೀಡಿ, ಈ ಉದ್ಘಾಟನೆ ಮತ್ತು ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.
ಉದ್ಘಾಟನಾ ಸಮಾರಂಭದ ನಂತರ ಮಾತನಾಡಿದ ಪ್ರಧಾನಿ ಮೋದಿ, ಬಡವರು ಅತ್ಯುತ್ತಮ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯುವುದು ತಮ್ಮ ಸರ್ಕಾರದ ಪ್ರಯತ್ನವಾಗಿದೆ. ಆಯುಷ್ಮಾನ್ ಭಾರತ್ ನಂತಹ ಯೋಜನೆಗಳು ರೋಗಿಗಳಿಗೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆಯನ್ನು ಒದಗಿಸುತ್ತವೆ ಎಂದರು.


ಆಸ್ಪತ್ರೆಗಳು ನಿಮ್ಮ ಸೇವೆಯಲ್ಲಿವೆ. ಆದರೆ ಈ ಹೊಸ ಆಸ್ಪತ್ರೆಗಳು ಖಾಲಿಯಾಗಿದ್ದರೆ ನನಗೆ ಸಂತೋಷವಾಗುತ್ತದೆ; ನಿಮ್ಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.
ನಮ್ಮ ಸರ್ಕಾರವು ಯೋಗ, ಫಿಟ್‌ನೆಸ್, ‘ಸ್ವಚ್ಛತಾ’ ಜೊತೆಗೆ ತಡೆಗಟ್ಟುವ ಆರೋಗ್ಯ ರಕ್ಷಣೆಯತ್ತ ಗಮನ ಹರಿಸಿದೆ. ದೇಶದಲ್ಲಿ ಹೊಸ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.
