Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಕರ್ತವ್ಯನಿರತ ಹೆಡ್ ಕಾನ್ಸ್‌ಟೇಬಲ್ ಗುಂಡಿಕ್ಕಿಕೊಂಡು ಆತ್ಮಹತ್ಯೆ

2

ವರದಿ : ದಿನೇಶ್ ರಾಯಪ್ಪನಮಠ

ಉಡುಪಿ: ಕರ್ತವ್ಯನಿರತ ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್‌ ತನ್ನ‌ ಸರ್ವೀಸ್ ರೈಫಲ್ ನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಆದಿ ಉಡುಪಿ ಪ್ರೌಢಶಾಲೆ ಬಳಿ ಶುಕ್ರವಾರ ನಡೆದಿದೆ.

ರಾಜೇಶ್ ಕುಂದರ್ ಆತ್ಮಹತ್ಯೆಗೆ ಮಾಡಿಕೊಂಡವರು. ಅವರು ಸಶಸ್ತ್ರ ಮೀಸಲು ಪಡೆಯ ಹೆಡ್‌ ಕಾನ್ಸ್‌ಟೇಬಲ್‌ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Advertisement. Scroll to continue reading.

ಇಂದು ಆದಿಉಡುಪಿ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ಉತ್ತರ ಪತ್ರಿಕೆ ಕೊಠಡಿಯ ಭದ್ರತಾ ನಿರ್ವಹಣೆಯಲ್ಲಿದ್ದ ಕರ್ತವ್ಯನಿರತರಾಗಿದ್ದ ವೇಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!