Connect with us

Hi, what are you looking for?

Diksoochi News

ರಾಜ್ಯ

ಎರಡು ಲಾರಿಗಳ ನಡುವೆ ಭೀಕರ ಅಪಘಾತ; ಇಬ್ಬರು ಚಾಲಕರ ಸಾವು

1

ಧಾರವಾಡ : ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮತ್ತೊಬ್ಬನ ಸ್ಥಿತಿ ಗಂಭೋರವಾಗಿದೆ.

ಹಾರೋಬೆಳವಡಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಬೆಳಗಾವಿ ಜಿಲ್ಲೆಯ ಸವದತ್ತಿ ಕಡೆಯಿಂದ ಬರುತ್ತಿದ್ದ ಲಾರಿಗೆ ಧಾರವಾಡ ಕಡೆಯಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಂದು ಲಾರಿಯಲ್ಲಿದ್ದ ಓರ್ವ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

Advertisement. Scroll to continue reading.

ಎರಡೂ ಲಾರಿಗಳ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕರ ಶವಗಳು ಲಾರಿಯಲ್ಲಿ ಸಿಲುಕಿವೆ.

ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!