ಕಲಬುರಗಿ : ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು 11 ದಿನಗಳ ಕಾಲ ಸಿಐಡಿ ಪೊಲೀಸರ ವಶಕ್ಕೆ ನೀಡಲಾಗಿದೆ.
ಶುಕ್ರವಾರ ಕಲಬುರಗಿಯ 3ನೇ ಜೆಎಂಎಫ್‌ಸಿ ಕೋರ್ಟ್ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳಾದ ದಿವ್ಯಾ ಹಾಗರಗಿ ಸೇರಿದಂತೆ ಇತರ 6 ಆರೋಪಿಗಳನ್ನು ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.
ದಿವ್ಯಾ ಜೊತೆಗೆ ಆರೋಪಿಗಳಾದ ಅರ್ಚನಾ, ಸುನೀತಾ, ದಿವ್ಯಾ ಹಾಗರಗಿಗೆ ಆಶ್ರಯ ನೀಡಿದ್ದ ಸೊಲ್ಹಾಪುರ ಮರಳು ವ್ಯಾಪಾರಿ ಸುರೇಶ್ ಕಾಟೇಗಾಂವ, ಕಾಳಿದಾಸ ಅವರನ್ನು ಸಹ ಸಿಐಡಿ ವಶಕ್ಕೆ ನೀಡಲಾಗಿದೆ.
Advertisement. Scroll to continue reading.

ಪುಣೆಯಲ್ಲಿ ರಾತ್ರಿ ಕರ್ನಾಟಕದ ಸಿಐಡಿ ಪೊಲೀಸರು ದಿವ್ಯಾ ಹಾಗರಗಿ ಸೇರಿದಂತೆ 5 ಆರೋಪಿಗಳನ್ನು ಬಂಧಿಸಿದ್ದರು. ಶುಕ್ರವಾರ ಕಲಬುರಗಿಗೆ ಕರೆತಂದು ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಹಗರಣದ ಆರೋಪಿಗಳಾದ ಸುನಂದಾ, ಶಾಂತಿಬಾಯಿ ಇನ್ನೂ ತಲೆಮರೆಸಿಕೊಂಡಿದ್ದಾರೆ.
Advertisement. Scroll to continue reading.
