ಉಡುಪಿ : ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇದೀಗ ಅವರು ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಸಿಕ್ಕಿದೆ.
ಹೆಡ್ ಕಾನ್ಸ್ಟೇಬಲ್ ಆಗಿದ್ದ ರಾಜೇಶ್ ಕುಂದರ್ ಆದಿ ಉಡುಪಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಉತ್ತರಪತ್ರಿಕೆಯ ಮೌಲ್ಯಮಾಪನ ಕೇಂದ್ರದ ಗಾರ್ಡ್ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಏಪ್ರಿಲ್ 28 ರಂದು ಅವರ ತಮ್ಮ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಮೃತಪಟ್ಟಿರುವುದಾಗಿ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ರು.
ಆದರೆ ಆತ್ಮಹತ್ಯೆ ಆಗಿರಬಹುದೆಂಬ ಗುಮಾನಿಯೂ ಇತ್ತು. ಇದೀಗ ಅವರ ಕಿಟ್ ಬ್ಯಾಗ್ ನಲ್ಲಿ ಡೆತ್ ನೋಟ್ ಕೂಡ ಸಿಕ್ಕಿದ್ದು, ಅದರಲ್ಲಿ ಮೂವರು ಪೊಲೀಸರ ಹೆಸರು ಉಲ್ಲೇಖವಾಗಿದೆ ಎನ್ನಲಾಗಿದೆ. ಅದರ ಕೊನೆಯಲ್ಲಿ ಎಹೆಚ್ಸಿ 104 ಎಂದು ಬರೆದು ಸಹಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
Advertisement. Scroll to continue reading.



































