ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ, ಈಗಾಗಲೇ ಹಲವರನ್ನು ಸಿಐಡಿ ವಶಕ್ಕೆ ನೀಡಲಾಗಿದೆ. ಈಗ ಕಲಬುರ್ಗಿಯ ಜ್ಞಾನಜ್ಯೋತಿ ಶಾಲೆಯ ಪ್ರಿನ್ಸಿಪಾಲ್ ಕಾಶಿನಾಥ್ ಸಿಐಡಿ ಪೊಲೀಸರ ಮುಂದೆ ಶರಣಾಗಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಕ್ವೀನ್ ಪಿನ್ ದಿವ್ಯಾ ಹಾಗರಗಿ, ಕಿಂಗ್ ಪಿನ್ ಗಳಾದ ಮಹಾಂತೇಶ್ ಪಾಟೀಲ್, ರುದ್ರಗೌಡ ಪಾಟೀಲ್ ಬಂಧಿಸಲಾಗಿದೆ.
ಇದೀಗ ಕಲಬುರ್ಗಿಯ ಜ್ಞಾನ ಜ್ಯೋತಿ ಶಾಲೆಯಲ್ಲಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾಗಿದ್ದಂತ ಶಾಲೆಯ ಪ್ರಾಂಶುಪಾಲ ಕಾಶಿನಾಥ್ ಕೂಡ ಸಿಐಡಿ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. 22 ದಿನಗಳಿಂದ ತಲೆಮರೆಸಿಕೊಂಡಿದ್ದ ಆತ ಕಲಬುರ್ಗಿಯ ಸಿಐಡಿ ಕಚೇರಿಗೆ ಆಗಮಿಸಿ ಶರಣಾಗಿದ್ದಾರೆ.
Advertisement. Scroll to continue reading.