ವರದಿ : ದಿನೇಶ್ ರಾಯಪ್ಪನಮಠ
ಬೈಂದೂರು : ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಗ್ಗರ್ಸೆ ಎಂಬಲ್ಲಿ ನಡೆದಿದೆ.
ತಗ್ಗರ್ಸೆ ಗ್ರಾಮದ ಬೇಬಿ ಶೆಡ್ತಿ ಎಂಬವರ ಮಗ ಸುದೀಪ್ (17 ) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಸುದೀಪ್ ಬೈಂದೂರಿನ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಪ್ರಥಮ ಪಿಯುಸಿ ಫಲಿತಾಂಶದಲ್ಲಿ ತಾನು ಅನುತ್ತೀರ್ಣನಾಗುತ್ತೇನೆ ಎಂಬ ಭಯಗೊಂಡು ಆತ್ಮಹತ್ಯೆ ಶರಣಾಗಿದ್ದಾನೆ ಎನ್ನಲಾಗಿದೆ.
Advertisement. Scroll to continue reading.

ಸುದೀಪ್ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಅಡುಗೆ ಮನೆಯಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


































