Connect with us

Hi, what are you looking for?

Diksoochi News

ಕರಾವಳಿ

ಪತ್ನಿ, ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಬಳಿಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ

2

ಕೇರಳ: ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಬೆಂಕಿ ಹಚ್ಚಿ ಕೊಂದು, ಬಳಿಕ ಆತ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಲಪುರಂ ಕೊಂಡಿಪರಂಬದಲ್ಲಿ ನಡೆದಿದೆ.

ಮೊಹಮ್ಮದ್ ಎಂಬ ವ್ಯಕ್ತಿ, ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗಿದ್ದಾನೆ.

ಬಳಿಕ ಅವರಿಗೆ ಬೆಂಕಿ ಹೆಚ್ಚಿ ಕೊಂದಿದ್ದಾನೆ. ನಂತರ ಆತನೂ ಬೆಂಕಿ ಹಚ್ಚಿಕೊಂಡು ಸಮೀಪದಲ್ಲೇ ಇದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

Advertisement. Scroll to continue reading.

ಘಟನೆಯಲ್ಲಿ ಮೊಹಮ್ಮದ್, ಆತನ ಪತ್ನಿ ಹಾಗೂ 11 ವರ್ಷದ ಬಾಲಕಿ ಸುಟ್ಟು ಕರಕಲಾಗಿದ್ದಾರೆ. ಮತ್ತೋರ್ವ ಐದು ವರ್ಷದ ಬಾಲಕಿಗೆ ಗಂಭೀರವಾದ ಸುಟ್ಟಗಾಯಗಳಾಗಿವೆ. ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಬಾಲಕಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ ಎನ್ನಲಾಗುತ್ತಿದೆ.

ಮೃತ ಮೊಹಮ್ಮದ್ ಯಾವ ಕಾರಣಕ್ಕೆ ಈ ಕೃತ್ಯ ಎಸಗಿದ್ದಾನೆ ಎಂಬುದು ತಿಳಿದು ಬಂದಿಲ್ಲ. ಇನ್ನು ಎಲ್ಲಾ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆಗೆ ನಡೆಸುತ್ತಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!