ಆತ್ರಾಡಿ : ಮದಗದ ಬಳಿ ಇರುವ ಮನೆಯೊಂದರಲ್ಲಿ ತಾಯಿ ಮಗಳ ಶವ ಪತ್ತೆಯಾಗಿದೆ. ಇದು ಕೊಲೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮೃತರನ್ನು ತಾಯಿ ಚೆಲುವಿ(30), ಮಗಳು ಪ್ರಿಯಾ (10) ಗುರುತಿಸಲಾಗಿದೆ.
ಚೆಲುವಿ ಆಸ್ಪತ್ರೆಯೊಂದರಲ್ಲಿ ಹೌಸ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದೆ.
Advertisement. Scroll to continue reading.

ರಾತ್ರಿ ಸಮಯದಲ್ಲಿ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮುಂಜಾನೆ ಸ್ಥಳೀಯರ ಮಾಹಿತಿ ಮೇರೆಗೆ ಹಿರಿಯಡಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಚೆಲುವಿ 7 ವರ್ಷದ ಹಿಂದೆ ಪತಿಯಿಂದ ದೂರವಾಗಿದ್ದರು ಎನ್ನಲಾಗಿದೆ. ಘಟನೆಯ ಬಗ್ಗೆ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.

In this article:astrology, daily horoscope, Diksoochi news, diksoochi Tv, diksoochi udupi, jyothishya
Click to comment

































