ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಅಪರಿಚಿತ ವಾಹನವೊಂದ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ಹೆಬ್ರಿಯಲ್ಲಿ ನಡೆದಿದೆ.
ಅನಂದ (50) ಮೃತ ವ್ಯಕ್ತಿ. ಇವರು ಉಡುಪಿಯ ಮಣಿಪಾಲದಲ್ಲಿ ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಮಂಗಳವಾರ ರಾತ್ರಿ ಹೆಬ್ರಿಯ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ಹೋಗುತ್ತಿದ್ದರು.

ಹೆಬ್ರಿ ಗ್ರಾಮದ ಬಂಟರ ಭವನದ ಎದುರುಗಡೆ ರಸ್ತೆ ತಲುಪಿದಾಗ ಯಾವುದೋ ಒಂದು ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.
ಪರಿಣಾಮ ಅನಂದ ಅವರು ರಸ್ತೆಯ ಬದಿಯಲ್ಲಿರುವ ಚರಂಡಿಯ ಬದಿಗೆ ಬಿದ್ದು, ಅವರ ತಲೆಗೆ ತೀವ್ರ ಸ್ವರೂಪದ ಗಾಯವಾಗಿದೆ.
ಗಾಯಾಳುವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಅಸ್ಪತ್ರೆಗೆ ಕರೆ ತರಲಾಗಿದೆ. ಆದರೆ, ಅವರು ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ವಾಹನ ಚಾಲಕನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ಅಪಘಾತ ನಡೆಸಿ, ಪರಾರಿಯಾಗಿದ್ದಾನೆ. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



































