ತ್ರಿಪುರ: ಮಾಣಿಕ್ ಸಹಾ ಅವರನ್ನು ಇಂದು ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಘೋಷಿಸಲಾಯಿತು.
ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ, ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಸಿಎಂ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದರು. ಇದರೊಂದಿಗೆ ತ್ರಿಪುರಾದ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು.
ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಶಾಸಕಾಂಗ ಪಕ್ಷವು ಸಂಜೆ 5 ಗಂಟೆಗೆ ಸಭೆ ಸೇರಲಿತ್ತು. ತ್ರಿಪುರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಂಸದ ಮಾಣಿಕ್ ಸಹಾ ಅವರನ್ನು ಆಯ್ಕೆ ಮಾಡಲಾಗಿದೆ.
Advertisement. Scroll to continue reading.

ಈ ನಡುವೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಮಾಣಿಕ್ ಸಹಾ ಅವರಿಗೆ ಶುಭಾಶಯಗಳು ಎಂದು ಬಿಪ್ಲವ್ ದೇವ್ ಟ್ವೀಟ್ ಮಾಡಿದ್ದಾರೆ.
In this article:Diksoochi news, diksoochi Tv, diksoochi udupi, MP Manik Saha, Thripura
Click to comment

































