ದೆಹಲಿ: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಶನಿವಾರ ತಡರಾತ್ರಿ ಅವರ ಕಾರು ಟೌನ್ಸ್‌ವಿಲ್ಲೆಯಲ್ಲಿ ರಸ್ತೆ ಅಪಘಾತ ಆಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಅಪಘಾತದ ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ
ಇತ್ತೀಚೆಗಷ್ಟೇ ಥಾಯ್ಲೆಂಡ್‌ನಲ್ಲಿ ಹೃದಯಾಘಾತದಿಂದ ಸಾರ್ವಕಾಲಿಕ ಶ್ರೇಷ್ಠ ಲೆಗ್ ಸ್ಪಿನ್ನರ್, ಕ್ರಿಕೆಟ್ ದಂತಕತೆ ಶೇನ್ ವಾರ್ನ್ ಹಠಾತ್ ನಿಧನರಾಗಿದ್ದರು.

ಇದೀಗ ಆಂಡ್ರ್ಯೂ ಸೈಮಂಡ್ಸ್ ರ ಹಠಾತ್ ಸಾವು ಶಾಕ್ ಕೊಟ್ಟಂತಾಗಿದೆ.
ಮಾಜಿ ಲೆಜೆಂಡರಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಶನಿವಾರ ತಡರಾತ್ರಿ ಕ್ವೀನ್ಸ್‌ಲ್ಯಾಂಡ್‍ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರ ನಿಧನದ ನಂತರ ಕ್ರಿಕೆಟ್ ಲೋಕ ಹಾಗೂ ಅವರ ಕೋಟ್ಯಂತರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.
ಸೈಮಂಡ್ಸ್ 1998 ರಿಂದ 2009 ರವರೆಗೆ ಆಸ್ಟ್ರೇಲಿಯನ್ ತಂಡದ ಭಾಗವಾಗಿದ್ದರು. ಸೈಮಂಡ್ಸ್ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ 26 ಟೆಸ್ಟ್, 198 ODI ಮತ್ತು 14 T20Iಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ 1462 ರನ್, ಏಕದಿನದಲ್ಲಿ 5088 ರನ್ ಮತ್ತು ಟಿ20ಯಲ್ಲಿ 337 ರನ್ ಗಳಿಸಿದ್ದಾರೆ. ಅವರು ತಮ್ಮ ಆಕ್ರಮಣಕಾರಿ ಶೈಲಿ ಮತ್ತು ಮೈದಾನದಲ್ಲಿ ಅತ್ಯುತ್ತಮ ಫೀಲ್ಡಿಂಗ್‌ಗೆ ಹೆಸರುವಾಸಿಯಾಗಿದ್ದರು.



































