ಬೆಂಗಳೂರು: ನಾಳೆ ಮಧ್ಯಾಹ್ನ 12.30ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ. https://karresults.nic.in ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ ಎಂ ಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈ ಕುರಿತು ಮಾಹಿತಿ ಬಿಡುಗಡೆ ಮಾಡಿದೆ. ಮೇ.19ರಂದು ಮಧ್ಯಾಹ್ನ 12.30ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಮಲ್ಲೇಶ್ವರಂನಲ್ಲಿರುವಂತ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದೆ.
ಈ ಬಗ್ಗೆ ಸಚಿವ ಬಿ.ಸಿ.ನಾಗೇಶ್ ಅವರೂ ಟ್ವೀಟ್ ಮಾಡಿದ್ದಾರೆ.

ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ. https://karresults.nic.in ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದಿದ್ದಾರೆ.
