ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಇಂದು ಎಲ್ಲಾ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಿಸಿದ್ದಾರೆ.
ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ, ಇಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಗಳಿಗೂ ರಜೆ ನೀಡಲಾಗಿದೆ ಎಂದು ಹೇಳಿದ್ದಾರೆ..
Advertisement. Scroll to continue reading.
ಇಂದು ಒಂದು ದಿನ ರಜೆಯನ್ನು ಶಾಲೆಗಳಿಗೆ ಘೋಷಣೆ ಮಾಡಲಾಗಿದೆ. ನಾಳೆ ಪರಿಸ್ಥಿತಿ ನೋಡಿಕೊಂಡು ರಜೆಯನ್ನು ಮುಂದುವರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.