ಉಡುಪಿ : ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೊಷಣೆಯಾಗಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶಿಸಿದ್ದಾರೆ.
Advertisement. Scroll to continue reading.