ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.
ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಬೆಂಗಳೂರು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಅಕ್ಕನ ಗಂಡನ ಮೇಲೆ ಸೇಡು ತೀರಿಸಿಕೊಳ್ಳಲು ಬಾಂಬ್ ಬೆದರಿಕೆ ಕರೆ ಮಾಡಿದ್ದಾಗಿ ಆರೋಪಿ ಹೇಳಿದ್ದಾನೆ.
Advertisement. Scroll to continue reading.

ಇಂದು ಮುಂಜಾನೆ 3.30 ರ ಸುಮಾರಿಗೆ ಪೊಲೀಸ್ ಕಂಟ್ರೋಲ್ ರೂಮ್ ಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ವಿಮಾನ ನಿಲ್ದಾಣದ ಪೊಲೀಸರು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಡಾಗ್ ಸ್ಕ್ವಾಡ್, ಸಿಎಸ್ ಎಫ್, ಬಿಎಸ್ ಎಫ್ ತಂಡದವರು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಏರ್ಲೈನ್ ಗೇಟ್ಗಳು ಸೇರಿದಂತೆ ವಿಮಾನ ನಿಲ್ದಾಣದ ಟರ್ಮಿನಲ್ನಲ್ಲಿ ಸುಮಾರು 2 ಗಂಟೆಗಳಿಗೂ ಹೆಚ್ಚು ಕಾಲ ತಪಾಸಣೆ ನಡೆಸಲಾಯಿತು. ಬಳಿಕ ಇದೊಂದು ಹುಸಿ ಕರೆ ಎಂದು ತಿಳಿದು ಬಂದಿದೆ.
Advertisement. Scroll to continue reading.



































