ಧಾರವಾಡ : ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ 7 ಜನರು ಮೃತಪಟ್ಟಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮತ್ತೆ ಇಬ್ಬರು ಸಾವನ್ನಪ್ಪಿದ್ದಾರೆ.
ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಮರಕ್ಕೆ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ 6 ಜನರ ಪೈಕಿ ಮತ್ತೆ ಇಬ್ಬರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಚೆನ್ನವ್ವ (45), ಮಂಜುಶ್ರೀ ಮೃತಪಟ್ಟಿದ್ದಾರೆ. ಬೆನಕಕಟ್ಟೆ ಗ್ರಾಮದ ಅನನ್ಯ (14), ಹರೀಶ್ (13), ಶಿಲ್ಪಾ (34), ನೀಲವ್ವ (60), ಮಧುಶ್ರೀ (20), ಮಹೇಶ್ವರಯ್ಯ (11), ಶಂಭುಲಿಂಗಯ್ಯ (11) ಸ್ಥಳದಲ್ಲೇ ಸಾವನ್ನಪ್ಪಿದವರು.
Advertisement. Scroll to continue reading.

ಈ ಮೂಲಕ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ.


































