ಗುಜರಾತ್ : ಎರಡು ಟ್ರಕ್‌ಗಳು ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಇಂದು ಬೆಳಿಗ್ಗೆ 3 ಟ್ರಕ್‌ಗಳು ಮತ್ತು ಕಾರಿನ ಮಧ್ಯೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ
ಅರಾವಳಿ ಜಿಲ್ಲೆಯ ಮೊದಸಾ-ಧನ್ಸೂರಾ ರಸ್ತೆಯ ಆಲಂಪುರ್ ಗ್ರಾಮದ ಬಳಿ ದುರ್ಘಟನೆ ನಡೆದಿದೆ.
Advertisement. Scroll to continue reading.

ಇದಲ್ಲದೇ, ರಾಸಾಯನಿಕವನ್ನು ಹೊತ್ತೊಯ್ಯತ್ತಿದ್ದ ಟ್ರಕ್ ಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಮೂರು ಟ್ರಕ್ ಗಳು ಹಾನಿಗೀಡಾಗಿವೆ. ಒಂದು ಟ್ರಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ರಾಸಾಯನಿಕ ಇದ್ದ ಕಾರಣ ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಡುವಂತಾಯಿತು.