ಮಹಾರಾಷ್ಟ್ರ : ಎಸ್‌ಯುವಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಆರು ಮಂದಿ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ 4.30ರ ಸುಮಾರಿಗೆ
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಹೆದ್ದಾರಿಯ ಒಂದು ನಿರ್ದಿಷ್ಟ ಭಾಗದಲ್ಲಿ ರಸ್ತೆಗೆ ಸಂಬಂಧಿಸಿದ ಕೆಲವು ಕಾಮಗಾರಿ ನಡೆಯುತ್ತಿರುವುದರಿಂದ ಪ್ರಸ್ತುತ ವಾಹನಗಳು ಒಂದು ಬದಿಯಲ್ಲಿ ಮಾತ್ರ ಸಂಚರಿಸುತ್ತಿವೆ.
ಹೀಗಾಗಿ ಇಲ್ಲಿ ಸಂಚರಿಸುತ್ತಿದ್ದ ವೇಳರ ಮತ್ತೊಂದು ವಾಹನವನ್ನು ಹಿಂದಿಕ್ಕಲು ಯತ್ನಿಸುತ್ತಿದ್ದ ಕ್ರೀಡಾ ಬಳಕೆಯ ವಾಹನ (ಎಸ್‌ಯುವಿ) ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
Advertisement. Scroll to continue reading.

ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.