Connect with us

Hi, what are you looking for?

Diksoochi News

ರಾಜ್ಯ

ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

1

ಬೆಂಗಳೂರು: ರಾಜ್ಯದ ಜನತೆ ಈಗಾಗಲೇ ಭಾರೀ ಮಳೆಯಿಂದಾಗಿ ತತ್ತರಿಸಿ ಹೋಗಿದ್ದಾರೆ. ಆದರೆ,ಮಳೆ ಮುಂದುವರೆಯಲಿರುವ ಸೂಚನೆ ಸಿಕ್ಕಿಸೆ. ಮತ್ತೆ ರಾಜ್ಯಾದ್ಯಂತ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ. ಹಾಗಾಗಿ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದಲ್ಲಿ ಶನಿವಾರ ಮತ್ತು ಭಾನುವಾರ ಮಳೆ ಕೊಂಚ ತಗ್ಗಿತ್ತು. ಇನ್ನೂ ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಭಾಗಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!