ಬೆಂಗಳೂರು: ಬಿಹಾರ ಮೂಲದ ಉದ್ಯಮಿಯೊಬ್ಬ ರಿವಾಲ್ವರ್ ತೋರಿಸಿ ಯುವತಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಆರೋಪದ ಹಿನ್ನೆಲೆಯಲ್ಲಿ ಶಾಂತಿನಗರ ನಿವಾಸಿ ಉದ್ಯಮಿ ಅನಿಲ್ ರವಿಶಂಕರ್ ಪ್ರಸಾದ್ ಎಂಬಾತನನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ
ಆತ ಹೆಣ್ಮಕ್ಕಳ ಪಿಜಿ ಕೂಡ ನಡೆಸುತ್ತಿದ್ದ. ಅದೇ ಪಿಜಿಯಲ್ಲಿ ವಿದ್ಯಾರ್ಥಿನಿ ಓದಲು ವಾಸವಾಗಿದ್ದಳು. ಈಕೆಗೆ ರಿವಾಲ್ವರ್ ತೋರಿಸಿ ಅತ್ಯಾಚಾರ ಎಸಗಿದ್ದಾನೆ ಅನ್ನೋ ಆರೋಪ ಕೇಳಿಬಂದಿದೆ.
ಆರೋಪಿಯನ್ನ ಬಂಧಿಸಿರುವ ಪೊಲೀಸರು, ರಿವಾಲ್ವಾರ್ ಕೂಡ ಜಪ್ತಿ ಮಾಡಿದ್ದಾರೆ. ಅಲ್ಲದೇ ಆರೋಪಿಯನ್ನ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Advertisement. Scroll to continue reading.

In this article:bengaluru, Diksoochi news, diksoochi Tv, diksoochi udupi, rape case
Click to comment

































