Connect with us

Hi, what are you looking for?

Diksoochi News

ರಾಜ್ಯ

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ; ಸಾವನ್ನಪ್ಪಿದವರ ಸಂಖ್ಯೆ 8 ಕ್ಕೆ ಏರಿಕೆ

1

ಹುಬ್ಬಳ್ಳಿ : ಹುಬ್ಬಳ್ಳಿ ತಾರಿಹಾಳಬೈಪಾಸ್ ಬಳಿ  ಲಾರಿ , ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದ್ದು, ಇದೀಗ  ಸಾವನ್ನಪ್ಪಿದವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.

ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಲಾರಿ, ಖಾಸಗಿ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ 5 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರು. 26 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಮತ್ತೆ ಮೂವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕೊಲ್ಹಾಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಲಾರಿ ಚಾಲಕ ಕ್ಲೀನರ್ ಸೇರಿ ಮೂವರು ಮೃತಪಟ್ಟಿದ್ದರೆ, ಖಾಸಗಿ ಬಸ್ ನಲ್ಲಿದ್ದ 5 ಜನರು ಸಾವನ್ನಪ್ಪಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!