ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ಇಂದು ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಎಸ್‍ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಹಾಗೂ ಬಿಜೆಪಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಕೇಶವ ಪ್ರಸಾದ್, ಹೇಮಲತಾ ನಾಯಕ್ ಟಿಕೆಟ್ ಪಡೆದಿದ್ದಾರೆ.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡುವ ಬಗ್ಗೆ ಮಾತು ಕೇಳಿ ಬಂದಿತ್ತು. ಆದರೆ, ಕುಟುಂಬ ರಾಜರಾಕರಣಕ್ಕೆ ಹೈಕಮಾಂಡ್ ಮನ್ನಣೆ ನೀಡಿಲ್ಲ. ಹಾಗಾಗಿ ಹೈ ಕಮಾಂಡ್ ನಿರಾಕರಿಸುವ ಮೂಲಕ ಮಾಜಿ ಸಿಎಂ ಯಡಿಯೂರಪ್ಪಗೆ ಶಾಕ್ ನೀಡಿದೆ.
Advertisement. Scroll to continue reading.