ಬಾಗಲಕೋಟೆ: ಶಾಲೆಯಿಂದ ಮನೆಗೆ ತೆರಳುತ್ತಿದ್ದಂತ ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿಯಾಗಿ, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆಯ ಐಹೊಳೆ ಸಮೀಪ ನಡೆದಿದೆ.
ನೇತ್ರಾವತಿ ರಗಟಿ (14), ಅಂಜಲಿ ಸೂಡಿ (14) ಸಾವನ್ನಪ್ಪಿರುವ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಐಹೊಳೆ ಬಳಿಯ ಕ್ಯಾದಿಗೇರಿ ಕ್ರಾಸ್ ಬಳಿಯಲ್ಲಿ, ಇಂದು ವಿದ್ಯಾರ್ಥಿಗಳು ತರಗತಿ ಮುಗಿಸಿಕೊಂಡು ತಮ್ಮ ಮನೆಗೆ ವಾಪಾಸಾಗುತ್ತಿದ್ದರು. ಈ ವೇಳೆ ಕಾರೊಂದು ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ನಡೆದಿದೆ.
Advertisement. Scroll to continue reading.