Connect with us

Hi, what are you looking for?

Diksoochi News

ರಾಜ್ಯ

ಹುಬ್ಬಳ್ಳಿ ಅಪಘಾತ ಪ್ರಕರಣ: ಚಿಕಿತ್ಸೆ ಫಲಿಸದೆ ಬಾಲಕಿ ಸಾವು; ಮೃತರ ಸಂಖ್ಯೆ 11ಕ್ಕೆ ಏರಿಕೆ

1

ಹುಬ್ಬಳ್ಳಿ: ಮದುವೆ ದಿಬ್ಬಣ ಹೊರಟಿದ್ದಂತ ಕ್ರೂಸರ್ ವಾಹನ, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಬ್ಬ ಬಾಲಕಿ ಮೃತಪಟ್ಟಿದ್ದು. ಈ ಮೂಲಕ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

9 ಮಂದಿ ಮೂರು ದಿನಗಳ ಹಿಂದೆ ಸಾವನ್ನಪ್ಪಿದ್ದರು. ನಿನ್ನೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಮತ್ತೊಬ್ಬರು ಸಾವನ್ನಪ್ಪಿದ್ದು, ಮೃತ ಸಂಖ್ಯೆ 10ಕ್ಕೆ ಏರಿಕೆಯಾಗಿತ್ತು.

ಕಳೆದ ಮೂರು ದಿನಗಳ ಹಿಂದೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿಯಲ್ಲಿ ಮದುವೆ ದಿಬ್ಬಣ ಹೊರಟಿದ್ದಂತಹ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತವುಂಟಾಗಿತ್ತು. ಸ್ಥಳದಲ್ಲಿಯೇ 7 ಮಂದಿ ಸಾವನ್ನಪ್ಪಿದ್ದರೇ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯಲ್ಲಿ ಸಾವನ್ನಪ್ಪಿದ್ದರು

Advertisement. Scroll to continue reading.

ನಿನ್ನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಮುತ್ತು ಮರಿಗೌಡ (16) ಎಂಬ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರ. ಇಂದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಆರಾಧ್ಯ ಹುತಮಲ್ಲಣ್ಣನವರ್ (5) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಹುಬ್ಬಳ್ಳಿ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಈ ಮೂಲಕ ಕ್ರೂಸರ್ ಕಾರಿನಲ್ಲಿದ್ದಂತ 13 ಮಂದಿಯಲ್ಲಿ 11 ಮಂದಿ ಸಾವನ್ನಪ್ಪಿದಂತೆ ಆಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!