ಬೆಂಗಳೂರು : ಕರ್ನಾಟಕದ ಎರಡು ರಾಜ್ಯಸಭಾ ಸ್ಥಾನಗಳ ಸಹಿತ 9 ರಾಜ್ಯಗಳ 16 ಸ್ಥಾನಗಳಿಗೆ ಬಿಜೆಪಿಯಿಂದ ರಾಜ್ಯಸಭಾ ಚುನಾವಣೆಗಾಗಿ ಟಿಕೆಟ್ ಘೋಷಣೆ ಆಗಿದೆ. ಕರ್ನಾಟಕ ರಾಜ್ಯಸಭಾ ಚುನಾವಣೆಯ ನಾಲ್ಕು ಸ್ಥಾನಗಳಿಗೆ ಘೋಷಣೆಯಾಗಿದ್ದಂತ ಚುನಾವಣೆಗೆ, ಬಿಜೆಪಿ ಅಭ್ಯರ್ಥಿಗಳಾಗಿ ನಟ ಜಗ್ಗೇಶ್ ಹಾಗೂ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಅಭ್ಯರ್ಥಿಗಳಾಗಿ ಇಬ್ಬರಿಗೆ ಟಿಕೆಟ್ ಘೋಷಣೆ ಮಾಡಿದೆ. ಬಿಜೆಪಿಯಿಂದ ಜಗ್ಗೇಶ್ ಹಾಗೂ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ ನಿರ್ಮಲಾ ಸೀತಾರಾಮನ್ ಅವರು ಮತ್ತೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗೋದು ಖಚಿತವಾಗಿದೆ..
ಕೇವಲ ಇಬ್ಬರು ಅಭ್ಯರ್ಥಿಗಳ ಹೆಸರು ಪ್ರಕಟಿಸಿರುವ ಬಿಜೆಪಿ 3ನೇ ಸ್ಥಾನವನ್ನು ಖಾಲಿ ಉಳಿಸಿಕೊಂಡಿದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂ.10 ರಂದು ಚುನಾವಣೆ ನಡೆಯಲಿದೆ.
Advertisement. Scroll to continue reading.

In this article:Actor Jaggesh, Diksoochi news, diksoochi Tv, diksoochi udupi, Rajya Sabha Election

Click to comment