ರಾಯಚೂರು : 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಓವರ್ ಟೇಕ್ ಮಾಡುವ ವೇಳೆ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಸಿರವಾರ ತಾಲೂಕಿನ ಜಕ್ಕಳದಿನ್ನಿ ಬಳಿ ನಡೆದಿದೆ.
ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.