Connect with us

Hi, what are you looking for?

Diksoochi News

ರಾಜ್ಯ

ಕಲಬುರಗಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್; ನಾಲ್ವರು ಪ್ರಯಾಣಿಕರು ಸಜೀವ ದಹನ

1

ಕಲಬುರಗಿ : ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ವೊಂದು ಹೊತ್ತಿ ಉರಿದ ಪರಿಣಾಮ ನಾಲ್ವರು ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಕಮಲಾಪುರ ಹೊರವಲಯದ ಹೆದ್ದಾರಿಯಲ್ಲಿ ಬಸ್ ವೊಂದು ಹೊತ್ತಿ ಉರಿದಿದೆ. ಪರಿಣಾಮ ನಾಲ್ವರು ಸಜೀವ ದಹವಾಗಿದ್ದಾರೆ.

ಖಾಸಗಿ ಬಸ್ ಗೋವಾ ದಿಂದ ಹೈದರಾಬಾದ್ ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

Advertisement. Scroll to continue reading.

ಗೂಡ್ಸ್ ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!